ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಗೆದ್ದಿ ರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿರುವುದಕ್ಕಾಗಿ ಅವರು ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೆ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಅಮಿತ್ ಶಾ ಹೇಳಿದರು.
ಇದೇ ವೇಳೆ, ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಶುಭಾಷಯ ಕೋರಿದರು ನೀವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕವಾಗಿದೆ. ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ಹರ್ಷ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.






































































