ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

























































