ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್ ಷಡಕ್ಷರಿ ಅವರು ಪುನರಾಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಸಿ.ಎಸ್ ಷಡಕ್ಷರಿ ಅವರ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಬಿ.ಪಿ ಕೃಷ್ಣೇಗೌಡ ಹಾಗೂ ಸಿ.ಎಸ್ ಷಡಕ್ಷರಿ ಅವರು ಕಣದಲ್ಲಿದ್ದರು.
2024-2029ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಸಿ.ಎಸ್.ಷಡಕ್ಷರಿ ಟವರು 507 ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ.