ಹಾವೇರಿ: ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾದ ನಿಂಗಮ್ಮ ಜಿಗಳೇರ್ (70), ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65) ಎಂದು ಗುರುತಿಸಲಾಗಿದೆ.