ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತಬಿಖೆಯನ್ನು ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮತ್ತಿಬ್ಬರನ್ನು ವಶಕ್ಕೆ ಪಡೆದಿದೆ. ಬೆಂಗಳೂರಿನ ಇಬ್ಬರನ್ನು ಎನ್‌ಐಎ ವಶಕ್ಕೆ ಪಡೆದಿದೆ ಎನ್ನಲಾಗಿದೆ.
ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ಅಧಿಜಾರಿಗಳು ವಿಚಾರಣೆಗೆ ಗುರಿಪಡಿಸಿದ್ದಾರೆ ಎನ್ನಲಾಗಿದೆ. ಈ ವ್ಯಕ್ತಿಗಳಿಗೆ ಬಾಂಬರ್ ಜೊತೆ ಸಂಪರ್ಕವಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎನ್ಬಲಾಗಿದೆ.