ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಕುರಿತಂತೆ ತನಿಖೆಯನ್ನು ಬಿರುಸುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ.
ಬೆಂಗಳೂರು ಸೇರಿದಂತೆ ಸುಮಾರು ಐದು ಕಡೆ ದಾಳಿ ನಡೆಸಿರುವ ಎನ್‌ಐಎ ತಂಡ, ಶಂಕಿತರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದೇ ವೇಳೆ ಚೆನ್ನೈನ ಮೂರು ಕಡೆ ಎನ್ಐಎ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದು ಅವರ ವಿಚಾರಣೆ ನಂತರ ಸಿಕ್ಕಿರುವ ಸುಳಿವಾಧರಿಸಿ ಇಂದು ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.