ಯಲ್ಲಾಪುರ : ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಂಡಳದ ವತಿಯಿಂದ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಹಮ್ಮಿಕೊಂಡ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಾಲ್ಗೊಂಡರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯು ಇಂದು ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿರುವುದು ಆದಿವಾಸಿಗಳಿಗೆ ಹಾಗೂ ಮಹಿಳೆಯರಿಗೆ ಅತ್ಯಂತ ಗೌರವದ ಸಂಗತಿಯಾಗಿದೆ ದೇಶದಾದ್ಯಂತ ವಿಜೃಂಭಣೆಯಿಂದ ಈ ವಿಜಯೋತ್ಸವನ್ನು ಆಚರಿಸಲಾಗುತ್ತದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಭಾರತವು ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಮುಖರಾದ ಶ್ರೀಕಾಂತ ಶೆಟ್ಟಿ, ವಿಜಯ ಮಿರಾಶಿ, ಗಣಪಯ ಮುದ್ದೇಪಾಲ್, ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ತಳವಾರ, ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.































































