ನವದೆಹಲಿ: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತಂತೆ ಬುಧವಾರ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ ಎಂದಿರುವ ಅವರು, ಜನಗಣತಿ ಕಾರ್ಯ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿತ್ತು ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು ಎಂದರು. ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲಾಗುತ್ತದೆ ಎಂದವರು ಪ್ರಕಟಿಸಿದರು.