ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಥಾನ ನೀಡಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ವಿದ್ಯಮಾನಗಳು ಬಿರುಸುಗೊಂಡಿವೆ. ಈ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ ನಾಯಕರು ಕೂಡಾ ಸಿಎಂ ಬದಲಾವಣೆ ಸಾಧ್ಯತೆ ಬಗ್ಗೆ ವಿಶ್ಲೇಷಣೆ ಮಾಡುತ್ತಿದ್ದಾರೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
‘ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಭಾಗವಹಿಸುವ ಈ ಸಭೆಯ ಆತಿಥ್ಯವನ್ನು ನಾನು ವಹಿಸಿಕೊಂಡಿದ್ದೇನೆ’ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ.
ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ.
ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ… pic.twitter.com/bfJo4d4WBQ
— Siddaramaiah (@siddaramaiah) July 6, 2025