ಇಂಫಾಲ: ಭಾರತ್ ಜೋಡೋ ಯಾತ್ರೆಯ ಯಶಸ್ಸಿನಿಂದ ಬೀಗುತ್ತಿರುವ ಕಾಂಗ್ರೆಸ್ ಇದೀಗ ಮತ್ತೊಂದು ಹಂತದ ಪಾದಯಾತ್ರೆಗೆ ಸಜ್ಜಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸಕಲ ತಯಾರಿ ನಡೆದಿದ್ದರೂ ಆರಂಭಿಕ ತಡೆ ಎದುರಾಗಿದೆ.
ಮಣಿಪುರದಿಂದ ಈ ಯಾತ್ರೆ ಆರಂಭವಾಗಬೇಕಿದ್ದು ಇದಕ್ಕೆ ಮಣಿಪುರ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಪ್ರಸಿದ್ಧ ಮೈದಾನ ಹಫ್ತಾ ಕಾಂಗ್ಜೆಬುಂಗ್‌ನಿಂದ ಪ್ರಾರಂಭವಾಗಲಿರುವ ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಪ್ರಾರಂಭಿಸಲು ಮಣಿಪುರದ ಎನ್ ಬಿರೇನ್ ಸಿಂಗ್ ಸರ್ಕಾರವು ಅನುಮತಿ ನಿರಾಕರಿಸಿದೆ. ಇದರಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ನಾಯಕರು ಪರ್ಯಾಯ ಕ್ರಮ ಅನುಸರಿಸಬೇಕೆಂದು ಎಐಸಿಸಿಗೆ ಮನವಿ ಮಾಡಿದೆ.






































































