ಬೆಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷ ಉಚ್ಚಾಟಿಸಿದೆ. ಕೆಪಿಸಿಸಿ ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರ ಉಚ್ಛಾಟನೆ ಕುರಿತು ಆಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಖಂಡ ಬಿ.ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಆರೋಪದ ಹಿನ್ನೆಲೆ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿಯೂ ಆಗಿರುವ ಗುರಪ್ಪ ನಾಯ್ಡುಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ನಾಯಕರು ತಿಳಿಸಿದ್ದಾರೆ.