ಬೆಂಗಳೂರು: ಪೆನ್ ಡ್ರೈವ್ ಕೇಸ್ ಬಗ್ಗೆ ರಾಜಕೀಯ ನಾಯಕರ ನಡುವೆ ವಾಕ್ಸಮರ ಮುಂದುವರಿದಿದ್ದರೆ, ಇನ್ನೊಂದೆಡೆ ನ್ಯಾಯಾಲಯದಲ್ಲೂ ವಿದ್ಯಮಾನ ನಡೆದಿದೆ. ಕುತೂಹಲಕಾರಿ ನಿರ್ಧಾರದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶಾಸಕ ಹೆಚ್.ಡಿ.ರೇವಣ್ಣ್ ವಾಪಸ್ ಪಡೆದಿದ್ದಾರೆ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಹೆಚ್.ಡಿ.ರೇವಣ್ಣ್ ಅವರು ನಿರೀಕ್ಷಣಾ ಜಾಮೀನು ಕೋರೊ ಅರ್ಜಿಸಲ್ಲಿಸಿದ್ದರು. ಈ ಅರ್ಜಿ ಕುರಿತಂತೆ ಶುಕ್ರವಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ.
ಹೆಚ್.ಡಿ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ. ಅತ್ಯಾಚಾರದ ಆರೋಪ ಇಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ ಎಂದು ಎಸ್ಐಟಿ ಪರ ಚಕೀಲರು ನ್ಯಾಯಾಲಯದ ಗಮನಸೆಳೆದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ. ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದರು.