ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪಕ್ಷದ 5 ಚುನಾವಣಾ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಯಿತು. ರಾಜ್ದ ಎಲ್ಲ 28 ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರು ಸೇರಿ ನಮ್ಮ ಅಭ್ಯರ್ಥಿಗಳು ಈ ವಾಹನಗಳನ್ನು ಬಳಸುತ್ತಾರೆ.
ವಿಧಾನಪರಿಷತ್ ಸದಸ್ಯ ಕೇಶವಪ್ರಸಾದ್, ಶಾಸಕ ಎಸ್. ಮುನಿರಾಜು, ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಇಂದು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಅವರ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಅದಕ್ಕಾಗಿ ವಾಹನಗಳನ್ನು ಬೀಳ್ಕೊಡಲಾಯಿತು.
ಪ್ರಧಾನಿಯವರ ಕಾರ್ಯಕ್ರಮಗಳಿಗೆ ಮಾತ್ರ ಬಳಸುವ ಬುಲೆಟ್ ಪ್ರೂಫ್ ವಾಹನವನ್ನೂ ಉದ್ಘಾಟನೆ ಮಾಡಲಾಯಿತು. ಪ್ರಧಾನಿಗಳಾದ ನರೇಂದ್ರ ಮೋದಿಯವರ ರ್ಯಾಲಿ, ಪ್ರಚಾರ ಕಾರ್ಯಕ್ರಮಗಳಿಗೆ ಇದನ್ನು ಬಳಸುವುದಾಗಿ ತಿಳಿಸಲಾಯಿತು.