ಬೆಳಗಾವಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು ಇದೀಗ ಸೋಲು-ಗೆಲುವಿನ ಲೆಕ್ಕಾಚಾರ ಸಾಗಿದೆ. ಇದೇ ವೇಳೆ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದವರ ಸಮೀಕ್ಷೆಯಂತೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14ರಿಂದ 17 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ’ ಎಂದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 14ರಿಂದ 17 ಸ್ಥಾನ ಗೆಲ್ಲಲಿದೆ’ ಎಂದವರು ವಿಶ್ಲೇಷಿಸಿದರು.