ಮಂಗಳೂರು: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೆಂಪಲ್ ಟೂರ್ ಕೈಗೊಂಡಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಮಂಜುನಾಥನ ದರ್ಶನ ಪಡೆದರು.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.