ನವದೆಹಲಿ: NEET ಪರೀಕ್ಷಾ ಅಕ್ರಮ ಆರೋಪ ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದು ಗದ್ದಲ ಎಬ್ಬಿಸಿದ್ದರಿಂದ ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.
ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದವು. ಇದರಿಂದಾಗಿ ಗದ್ದಲ ಏರ್ಪಟ್ಟ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಸ್ಪೀಕರ್ ಮುಂದೂಡಿದರು.
ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು NEET ಅಕ್ರಮ ಕುರಿತ ಚರ್ಚೆಗೆ ಅವಕಾಆ ಕೋರಿ ಪ್ರತಿಭಟನೆ ಮುಂದುವರೆಸಿದವು. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ವೇಳೆ ಚರ್ಚೆಗೆ ಅವಕಾಶ ನೀಡುವ ಸ್ಪೀಕರ್ ಓಂ ಬಿರ್ಲಾ ಅವರ ಭರವಸೆಗೆ ಪ್ರತಿಪಕ್ಷಗಳು ಒಪ್ಪಲಿಲ್ಲ. ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸದನದಲ್ಲಿ ಗದ್ದಲ ಉಂಟಾಯಿತು. ಸದನ ನಡೆಸಲಾಗದರೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಸೋಮವಾರದವರೆಗೆ ಮುಂದೂಡಿದರು.






































































