ಬೆಂಗಳೂರು: ಲೋಕಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕೆಲವು ದಿನಗಳ ಹಿಂದೆಯೇ ಜೆಡಿಎಸ್ ವರಿಷ್ಟರೂ ಆದ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಜೆಡಿಎಸ್-ಬಿಜೆಪಿ ಮೈತ್ರಿ ಪೈಕಿ ಬಿಜೆಪಿ ಬಿಟ್ಟುಕೊಟ್ಟಿರುವ ಕೋಲಾರ, ಮಂಡ್ಯ, ಹಾಸನ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದರು. ಶುಕ್ರವಾರ ಪಕ್ಷದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಜೆಡಿಎಸ್ ಪ್ರಕಟಿಸಿದೆ.
ಮಂಡ್ಯದಿಂದ ಎಚ್.ಡಿ.ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್ ಬಾಬು ಹಾಗೂ ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ಪ್ರಕಟಿಸಿದೆ.