ಹಾಸನ: ಲೋಕಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ.
- ಕೋಲಾರದಲ್ಲಿ ಮಲ್ಲೇಶ್ ಬಾಬು ಸ್ಪರ್ಧೆ ಮಾಡಲಿದ್ದಾರೆ.
- ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅವಕಾಶ ಸಿಕ್ಕಿದೆ.
ಈ ಕುರಿತಂತೆ ಹಾಸನದಲ್ಲಿ ಮಾಹಿತಿ ಹಂಚಿಕೊಂಡಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಇತ್ತೀಚೆಗೆ ಸಭೆ ಸೇರಿದ್ದ ಕೋರ್ ಕಮಿಟಿಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.