ವಯನಾಡ್: ಮುಂಗಾರು ಮಳೆ ಸರಣಿ ಅವಘಡಗಳಿಗೆ ಸಾಕ್ಚಿಯಾಗುತ್ತಿದ್ದು ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 150 ದಾಟಿದೆ.
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು 400ಕ್ಕೂ ಹೆಚ್ಚು ಕುಟುಂಬಗಳು ದುರಂತದಿಂದ ಸಂಕಷ್ಟಕ್ಕೆ ಸಿಲುಕಿವೆ ಎಂದು ಹೇಳಲಾಗುತ್ತಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.