ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಎಐಸಿಸಿ ನಾಯಕ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದರು. ಈ ಪೈಕಿ ಒಂದು ಕ್ಷೇತ್ರವನ್ನಷ್ಟೇ ಪ್ರತಿನಿಧಿಸಲು ಅವಕಾಶ ಇರುವುದರಿಂದ ತಮ್ಮ ಕುಟುಂಬ ಬಹುಕಾಲದಿಂದ ಪ್ರತಿನಿಧಿಸುತ್ತಿರುವ ರಾಯಬರೇಲಿ ಕ್ಷೇತ್ರವನ್ನು ಅವರು ಉಳಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ.
ಅವರ ರಾಜೀನಾಮೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಲೋಕಸಭೆಯ ಸಚಿವಾಲಯ, ಜೂನ್ 18 ರಿಂದ ಜಾರಿಗೆ ಬರುವಂತೆ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದೆ.