ಬೆಂಗಳೂರು: ವರ್ಷಾರಂಭದ ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಜನವರಿ 4 ರಿಂದ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






















































