ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ ಘೋಷಿಸಿರುವುದು ಸಾರ್ವಜನಿಕರಲ್ಲಿ ಸಂತಸ ತಂದಿದೆ.
ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಗಳು ಮಂಗಳವಾರದಿಂದಲೇ ಈ ಹೊಸ ದರ ಪ್ರಕಟಿಸಿವೆ. ಇಳಿಕೆಯಿಂದಾಗಿ ಹೋಟೆಲ್, ರೆಸ್ಟೋರೆಂಟ್, ವ್ಯಾಪಾರಿ ಬಳಕೆದಾರರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.ಆದರೆ, ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.