ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಜನ ಕಂಗಾಲಾಗಿದ್ದಾರೆ. ಇದೇ ವೇಳೆ, ಈ ವಾರಾಂತ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಮೇ 6 ಹಾಗೂ 7ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ