ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಆಕ್ರೋಶದ ಅಲೆ ಎಬ್ಬಿಸಿದೆ. ಈ ಪ್ರಕರಣ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಕಿಡಿ ಕಾರಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಸಚಿವ ಬಿ.ನಾಗೇಂದ್ರರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ @INCKarnataka ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ನಡೆದ ₹187.33 ಕೋಟಿ ಹಗರಣ ಸಂಬಂಧ ಸಚಿವ @BNagendraINC ಅವರು ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು… pic.twitter.com/Emh26d9gH0
— BJP Karnataka (@BJP4Karnataka) May 27, 2024
ಇದೇ ವೇಳೆ ಟ್ವೀಟ್ ಮಾಡಿರುವ ಬಿಜೆಪಿ, ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ ಎಂದು ಆರೋಪಿಸಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ನಡೆದ ₹187.33 ಕೋಟಿ ಹಗರಣ ಸಂಬಂಧ ಸಚಿವ ನಾಗೇಂದ್ರ ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಹಾಗಾಗಿ ಹಗರಣದ ಪ್ರಮುಖ ಆರೋಪಿ ಸಚಿವ ಬಿ. ನಾಗೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಸಿಎಂ ಅವರು ಕೂಡಲೇ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ.