ಬೆಂಗಳೂರು: ವಾಲ್ಮೀಕಿ ಮತ್ತು ಮುಡಾ ಹಗರಣಗಳು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಂಡ ಕಾರಣ ಕಾಂಗ್ರೆಸ್ ನಾಯಕರು ಕೋವಿಡ್ ಸಮಯದಲ್ಲಿ ಹಗರಣವಾಗಿದೆ ಎಂದು ಹಾಸ್ಯಾಸ್ಪದ ಆಪಾದನೆ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅಶೋಕ್, ಕಳೆದ ನಾಲ್ಕು ವರ್ಷಗಳಿಂದ ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಿದ್ದರು? ಇದು ದ್ವೇಷದ ರಾಜಕಾರಣವಲ್ಲದೆ ಬೇರೇನೂ ಅಲ್ಲ ಎಂದಿದ್ದಾರೆ.
ವಾಲ್ಮೀಕಿ ಮತ್ತು ಮುಡಾ ಹಗರಣಗಳು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಂಡ ಕಾರಣ ಕಾಂಗ್ರೆಸ್ ನಾಯಕರು ಕೋವಿಡ್ ಸಮಯದಲ್ಲಿ ಹಗರಣವಾಗಿದೆ ಎಂದು ಹಾಸ್ಯಾಸ್ಪದ ಆಪಾದನೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಿದ್ದರು? ಇದು ದ್ವೇಷದ ರಾಜಕಾರಣವಲ್ಲದೆ ಬೇರೇನೂ ಅಲ್ಲ.
– ಶ್ರೀ @RAshokaBJP , ಪ್ರತಿಪಕ್ಷ… pic.twitter.com/3oIMXUwl27
— BJP Karnataka (@BJP4Karnataka) December 14, 2024