ಬೆಂಗಳೂರು: ವಿಜಯಪುರ ನಗರಪಾಲಿಕೆ ಮತ್ತು ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಬಿಜೆಪಿ ಗೆದ್ದಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಜಯಶಾಲಿಗಳಾದ ಅಭ್ಯರ್ಥಿಗಳನ್ನು ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ. ವಿಜಯಪುರ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಪಕ್ಷವು ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಮತದಾರರು, ಶ್ರಮಿಸಿದ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.
























































