ನವದೆಹಲಿ: ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ (93) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಜನರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು ಹೊಂದಿದ ಅತ್ಯುತ್ತಮ ನಾಯಕ” ಎಂದು ಅವರನ್ನು ಬಣ್ಣಿಸಿದ್ದಾರೆ.
1931ರ ಡಿಸೆಂಬರ್‌ನಲ್ಲಿ ಲಾಹೋರ್‌ನಲ್ಲಿ ಜನಿಸಿದ ಮಲ್ಹೋತ್ರಾ, ಮಂಗಳವಾರ ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಧಾನಿ ಮೋದಿ ‘X’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, “ಮಲ್ಹೋತ್ರಾ ಜೀ ಅವರು ದೆಹಲಿಯಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಸತ್ತಿನಲ್ಲಿನ ಅವರ ಹಸ್ತಕ್ಷೇಪಗಳನ್ನು ಮರೆಯಲು ಸಾಧ್ಯವಿಲ್ಲ. ಅವರ ಅಗಲಿಕೆ ನೋವು ತಂದಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು” ಎಂದು ಬರೆದಿದ್ದಾರೆ.