ಬೆಂಗಳೂರು: ಹುಬ್ಬಳ್ಳಿಯಲ್ಲಿನ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಘಟನೆಯನ್ನು ಚಿತ್ರನಟ ಧ್ರುವ ಸರ್ಜಾ ಖಂಡಿಸಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯವೆಂದಿರುವ ಅವರು, ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಎಂದು ಒತ್ತಾಯಿಸಿದ್ದಾರೆ.
ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು. ಹಾಗಾಗಿ ಎಲ್ಲಾ ಆಯಾಮದಲ್ಲೂ ತನಿಖೆ ನಡೆದು ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏
ಜೈ ಆಂಜನೇಯ 🙏 pic.twitter.com/z1gkJkEETU— Dhruva Sarja (@DhruvaSarja) April 19, 2024




















































