ಬೆಂಗಳೂರು: ವಿದ್ಯೆಗಿಂತ ದೊಡ್ಡದು ಮತ್ತೊಂದಿಲ್ಲ ಹಾಗಾಗಿ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪು ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರೂ ಸಹಕಾರ ಕೊಡಬೇಕು ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದ ಅವರು, ತರಗತಿ ಬಹಿಷ್ಕಾರಿಸದೆ ಪರೀಕ್ಷೆಯಲ್ಲಿ ಭಾಗವಹಿಸಬೇಕು ಎಂದರು.