ಬೆಂಗಳೂರು: ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಪರಿಷತ್ ಸಭೆ ಎರಡು ದಿನಗಳ ಕಾಲ (ಅ.27-28) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.
ಈ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರದ ರಾಜ್ಯದ ರಾಜಕೀಯ ಬೆಳವಣಿಗೆ, ಆರ್ಥಿಕ ವಿಚಾರಗಳು, ಕೋಮು ಸಂಘರ್ಷದ ವಿಷಯಗಳ ವಿಚಾರವಾಗಿ ಚರ್ಚೆ ನಡೆಸಲಾಗುವುದು. ಎರಡೂ ದಿನಗಳ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಎಂದು ಅವರು ಹೇಳಿದರು.
ನವೆಂಬರ್ 1ರಂದೇ ಮುಂದಿನ ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಾರ್ವಜನಿಕ ಸಮಾರಂಭದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಆವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
























































