ಬೆಳಗಾವಿ: ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರ ಹಾಕಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಪ್ರದರ್ಶನ ನಡೆಸಿದರು.
ವೀರ ಪುರುಷರ, ಮಹನೀಯರ ಭಿತ್ತಿಚಿತ್ರಗಳನ್ನು ಹಿಡಿದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಆರ್ ವಿ ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ಮುಖಂಡರು ಬೆಳಗಾವಿ ಸುವರ್ಣಸೌಧದ ಪ್ರವೇಶ ದ್ವಾರದಲ್ಲಿ ಸೋಮವಾರ ಬೆಳಗ್ಗೆ ಪ್ರದರ್ಶನ ನಡೆಸಿದರು.





















































