ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ಪಿ.ಇ. ಎಸ್.ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದೊರೈಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.























































