ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್ ದಿಗ್ವಿಜಯ; ‘ಕೈ’ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಹುಮನಾಬಾದ್ ಪುನರಾಯ್ಕೆ
ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಮಾಲ್ ಪ್ರದರ್ಶಿಸಿದ್ದ ಕಾಂಗ್ರೆಸ್ ಪಕ್ಷ ಇದೀಗ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ಸಾಧಿಸಿದೆ. ಹಾಲಿ ಸದಸ್ಯ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಹುಮನಾಬಾದ್ ಅವರು ಪುನರಾಯ್ಕೆಯಾಗಿದ್ದಾರೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಗುರುವಾರ ಆರಂಭವಾಗಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದಲ್ಲಿ ಹಾಲಿ ಸದಸ್ಯ ಕಾಂಗ್ರೆಸ್ ಪಕ್ಷದ ಡಾ. ಚಂದ್ರಶೇಖರ ಪಾಟೀಲ್ ಹುಮನಾಬಾದ್ ಹಾಗೂ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ನಡುವೆ ಪೈಪೋಟಿ ನಡೆದಿತ್ತು.
ಪ್ರಥಮ ಪ್ರಾಶಸ್ತ್ಯದ ಮತದ ನಂತರ ನಿಗದಿಪಡಿಸಲಾದ ಕೋಟಾ 48,260 ಮತಗಳು. ಎರಡನೇ ಪ್ರಾಶಸ್ತ್ಯದ ಮತ ಗುರಿ ತಲುಪಿದ ಹಿನ್ನೆಲೆಯಲ್ಲಿ ಚಂದ್ರಶೇಖರ ಪಾಟೀಲ್ ಅವರ ಗೆಲುವನ್ನು ಘೋಷಿಸಲಾಯಿತು.






















































