ಬೆಂಗಳೂರು: ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ನೂತನ ಸದಸ್ಯರ ಪ್ರಮಾಣವಚನ ಇಂದು ನೆರವೇರಿತು.
ವಿಧಾನಸಭೆಯಿಂದ ಆಯ್ಕೆಯಾದ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನಪರಿಷತ್ ಸದಸ್ಯರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್. ಕೆ. ಪಾಟೀಲ್ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕಾಂಗ್ರೆಸ್‌ನ ಡಾ.ಕೆ.ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು, ಜಗದೇವ್ ಗುತ್ತೇದಾರ್, ಎನ್.ಎಸ್.ಬೋಸರಾಜು, ಡಾ.ಯತೀಂದ್ರ ಹಾಗೂ ಎ. ವಸಂತ ಕುಮಾರ್, ಬಿಜೆಪಿಯ ಮುಲೆ ಮಾರುತಿರಾವ್, ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಜೆಡಿಎಸ್‌ನ ಟಿ.ಎನ್.ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.
ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್‌ನ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ರಾಮೋಜಿಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಿ.ಟಿ.ಶ್ರೀನಿವಾಸ, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕ್ಷರ ಕ್ಷೇತ್ರದಿಂದ ಆಯ್ಕೆಯಾಗಿರುವ ಜೆಡಿಎಸ್‌ನ ಎಸ್.ಎಲ್.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ವಿವೇಕನಾಂದ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿರುವ ಡಿ.ಟಿ.ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.






































































