ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ವಿಧಾನ ಸಭೆ ಅಂಗೀಕರಿಸಿದೆ.
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ವಿದೇಯಕ ಇದಾಗಿದೆ.
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2024 ಅಂಗೀಕಾರಗೊಂಡಿದೆ.