ಬೆಂಗಳೂರು: ವಿಬಿ ಜಿ ರಾಮ್ ಜಿ ನೂತನ ಕಾಯ್ದೆ ಕುರಿತು ಚರ್ಚಿಸಲು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನವರಿ 22 ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಿ, ನೂತನ ಕಾಯ್ದೆಯ ಕುರಿತು ವಿಸ್ತೃತವಾಗಿ ಚರ್ಚಿಸಿ, ನಿರ್ಣಯ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದವರು ತಿಳಿಸಿದ್ದಾರೆ.
ವಿಬಿ ಜಿ ರಾಮ್ ಜಿ ನೂತನ ಕಾಯ್ದೆಯು ಸಮಾಜದ ಮೇಲೆ ಬೀರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜನವರಿ 22 ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಿ, ನೂತನ ಕಾಯ್ದೆಯ ಕುರಿತು ವಿಸ್ತೃತವಾಗಿ ಚರ್ಚಿಸಿ, ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.


























































