ಯುಜೀನ್: ಪದಕ ವೀರ ನೀರಜ್ ಚೋಪ್ರಾ ಈ ಬಾರಿ ಮತ್ತೆ ವಿಜಯ ಮಾಲೆಯನ್ನು ಕೊರಳಿಗೇರಿಸಿಕೊಂಡಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.
ಆ್ಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದರೆ, ನೀರಜ್ ಚೋಪ್ರಾ ಅವರು, ನಾಲ್ಕನೇ ಸುತ್ತಿನಲ್ಲಿ 88.13 ಮೀಟರ್ ದೂರ ಎಸೆಯುವ ಮೂಲಕ ಬೆಳ್ಳು ಪದಕ ಗೆದ್ದಿದ್ದಾರೆ.
ರಜತ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.




















































