ಕಾರವಾರ: ಶಾಲಾ ಪ್ರವಾಸದ ಬಸ್ಸೊಂದು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಬಳಿ ಅಪಘಾತಕ್ಕೀಡಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಸಮೀಪ ಗಣೇಶ ಗುಡಿ ಬಳಿ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರವಾಸ ತೆರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಸಾರ್ವಜನಿಕರು ದಾಂಡೇಲಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.