ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಮಾಡಿ ಕೊಲೆಗೆ ಯತ್ನಿಸಿದ್ದಾರೆಂಬ ಆರೋಪದಲ್ಲಿ ಬಂಧಿತರಾಗಿರುವ ಮೂವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸರುಮೂವರು ಆರೋಪಿಗಳನ್ನು ಬಂಧಿಸಿದ್ದರು. ಚಂದ್ರು, ವಿಶ್ವನಾಥ್, ಕೃಷ್ಣಮೂರ್ತಿ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಆರೋಪಿಗಳಿಗೆ ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.