ಹಾವೇರಿ: ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ಸಮೀಪ ತಡಸ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.