ಬೆಂಗಳೂರು: ಉಡುಪಿ ಜಿಲ್ಲೆ ಶಿರೂರು ಬಳಿ ಆಂಬ್ಯುಲೆನ್ಸ್ ಅಫಘಾತ ನಂತರ ಇದೀಗ ಆ ಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಡ ಹೆಚ್ಚಾಗಿದೆ. ಈ ಆಗ್ರಹಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಧ್ವನಿಗೂಡಿಸಿದ್ದಾರೆ.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ?
ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. 3/6— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದಿರುವ ಕುಮಾರಸ್ವಾಮಿ, ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರ್ಕಾರ ಕಣ್ತೆರೆಯಲೇಬೇಕು ಎಂದು ಹೇಳಿದ್ದಾರೆ.
ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ. 6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022





































































