ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿ ಗೊಳಿಸಿರುವ ಪ್ರಕರಣ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಬೆಳಿಗ್ಗೆ ಪುತ್ಥಳಿಯು ಧ್ವಂಸಗೊಂಡಿರುವುದು ಕಂಡು ಬಂದಿದೆ. ಈ ಸಂಬಂಧ ಕರ್ನಾಟಕ ಸುವರ್ಣ ವೀರಶೈವ ಲಿಂಗಾಯತ ಮಹಾಸಭಾ ಮುಖಂಡರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.























































