ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಪಯಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
ಪಿಳ್ಳೈಯಾರ್ಪಟ್ಟಿಸಮೀಪದ ತಿರುಪತ್ತೂರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ಸುಗಳ ಮುಖಭಾಗ ನುಜ್ಜುಗುಜ್ಜಾಗಿದೆ. ಬಸ್ಸುಗಳಲ್ಲಿದ್ದ ಸುಮಾರು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ






















































