ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಅಪರಾಧ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಎನ್‌ಕೌಂಟರ್ ನಡೆದಿದೆ.
ಆರೋಪಿಯನ್ನು ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆ ರೌಡಿ ಶೀಟರ್ ಶೋಹಿಬ್ ಎಂಬಾತ ದಾಳಿ ಮಾಡಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಈ ಘಟನೆ ನಡೆದಿದ್ದು ಕಾಲಿಗೆ ಗುಂಡು ತಗುಲಿ ಗಾಯಗೊಂಡಿರುವ ರೌಡಿ ಶೀಟರ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿನ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಪೊಲೀಸರು ತೆರಳಿದ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಈ ಎನ್‌ಕೌಂಟರ್ ನಡೆದಿದೆ.