ದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯ ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ತಾವು ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ಬಂದಿದ್ದೇನೆ ಎಂದರು.
‘ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ’ ಎಂದರು.





































































