ನವದೆಹಲಿ: ಲೋಕಸಭೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಂತು. ವಾದವನ್ನು ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜನವರಿ 3ಕ್ಕೆ ಮುಂದೂಡಿದೆ.
ಹಣಕ್ಕಾಗಿ ಪ್ರಶ್ನೆಗಳನ್ನು ಕೇಳುವ’ ವಿಷಯದಲ್ಲಿ ‘ಅನೈತಿಕ ಮತ್ತು ಅಸಭ್ಯ ವರ್ತನೆ’ ಹಿನ್ನೆಲೆಯಲ್ಲಿ ಟಿಎಂಸಿ ನಾಯಕಿ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ವಿಎನ್ ಭಟ್ಟಿ ಅವರ ಪೀಠದ ಮುಂದೆ ವಿಚಾರಣೆ ಪ್ರಾರಂಭವಾಗುತ್ತಿದ್ದಂತೆಯ ಮೊಯಿತ್ರಾ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಆದರೆ ಈ ಸಂಬಂಧದ ಕಡತವನ್ನು ಪರಿಶೀಲಿಸಲು ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಮುಂದಿನ ದಿನ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಪೀಠ ಹೇಳಿ ವಿಚಾರಣೆಯನ್ನು ಮುಂದೂಡಿತು.