ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಆರೋಪ ಮಾಡಿರುವ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಹಣಕ್ಕೆ ಬೇಡಿಕೆ ಇಟ್ಟಿದ್ದು, ಕೊಲೆ ಬೆದರಿಕೆ ಒಡ್ಡಿದ್ದಾರೆ ಗಂಭೀರ ಆರೋಪಗಳನ್ನು ಮಾಡಿ ಗುತ್ತಿಗೆದಾರ, 26 ವರ್ಷದ ಸಚಿನ್ ಸಾವಿಗೆ ಶರಣಾಗಿದ್ದಾರೆ.
ಸುಮಾರು 7 ಪುಟಗಳ ಡೆತ್ನೋಟ್ ಬರೆದಿಟ್ಟು ಅವರು ಚಲಿಸುತ್ತದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.