ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12:30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಬ್ರಾಹ್ಮಣ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನದಲ್ಲಿ ಪೊಲೀಸ್ ಪಡೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿತು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಟಿ.ಎಸ್. ಶ್ರೀವತ್ಸ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಮಹದೇವಪ್ಪ ಅವರು ಭೈರಪ್ಪರ ಪುತ್ರರಾದ ರವಿಶಂಕರ್ ಮತ್ತು ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
ಪುತ್ರರು ಅಂತಿಮ ವಿಧಿ ನೆರವೇರಿಸಿದ ವೇಳೆ, ಭೈರಪ್ಪರ ಇಚ್ಛೆಯಂತೆ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಹಾಜರಿದ್ದರು. ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೂಡಿ ಅವರು ಭೈರಪ್ಪರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.