ಬೆಂಗಳೂರು: ದೇಶಾದ್ಯಂತ ಇಂದು ಸಂವಿಧಾನ ದಿನ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಸಂವಿಧಾನ ದಿನಾಚರಣೆ ಗಮಬಸೆಳೆಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಸರ್ಕಾರಿ ನೌಕರರಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೊಧಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮೊದಲಾದವರು ಹಾಜರಿದ್ದರು.





































































