ಬೆಂಗಳೂರು: ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿ ಮೇಲ್ಸೇತುವೆಯಲ್ಲಿರುವ ವೀರ್ ಸಾವರ್ಕರ್ ಅವರ ಹೆಸರಿನ ಫಲಕಕ್ಕೆ ಕಪ್ಪು ಬಣ್ಣ ಬಳಿದು ವಿಕೃತಿ ಮೆರೆಯಲಾಗಿದೆ. ಈ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ NSUI ಕಾರ್ಯಕರ್ತರು ಯಲಹಂಕದಲ್ಲಿ ಮೇಲ್ಸೇತುವೆಗೆ ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕಪ್ಪು ಬಣ್ಣ ಬಳಿಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಸಂಬಂಧ ಮೂವರು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ (NSUI) ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
























































